ಶ್ರೀಕಂಠ ಬಾಳಗಂಚಿ ಎಂಬ ನಾಮದೇಯನಾದ ನಾನು, ಮೂಲತಃ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಬಾಳಗಂಚಿ ಗ್ರಾಮದ ಖ್ಯಾತ ವಾಗ್ಗೇಯಕಾರರೂ, ಗಮಕಿಗಳು ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಗಮಕಿ ದಿ. ಶ್ರೀ ನಂಜುಂಡಯ್ಯನವರ ಮೊಮ್ಮಗ ಮತ್ತು ಗಮಕಿ ದಿ. ಶ್ರೀ ಶಿವಮೂರ್ತಿಗಳ ಸುಪುತ್ರ. ಪ್ರಸ್ತುತ ಬೆಂಗಳೂರಿನ ವಿಶ್ವವಿಖ್ಯಾತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೂ ಹವ್ಯಾಸಿ ಬರಹಗಾರ. ತಮ್ಮ ಬ್ಲಾಗ್ ಮುಖಾಂತರ ಕ್ರೀಡೆ, ಸಾಮಾಜಿಕ ಮತ್ತು ಪ್ರಸ್ತುತ ವಿಷಯಗಳ ಬಗ್ಗೆ ಸಮಯ ಸಿಕ್ಕಾಗಲೆಲ್ಲಾ ಲೇಖನ ಬರೆದು ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಕಟಿಸಿದ್ದೇನೆ. ಕನ್ನಡ ನಾಡು, ಭಾಷೆ, ನುಡಿಗಳ ಬಗ್ಗೆ ಅಪಾರವಾದ ಗೌರವ ಮತ್ತು ಪ್ರೇಮ ಇರುವವ. ಜಿ.ಪಿ.ರಾಜರತ್ನಂರವರ ನರಕಕ್ಕಿಳ್ಸಿ ನಾಲ್ಗೆ ಸೀಳ್ಸಿ ಬಾಯ್ ಒಲ್ಸಾಕಿದ್ರೂನೂ ಮೂಗ್ನಲ್ ಕನ್ನಡ್ ಪದ್ವಾಡ್ತೀನಿ ಅಂತಾ ಹೇಳಿರುವುದನ್ನು ಅಕ್ಷರಶಃ ಪಾಲಿಸುತ್ತಿರುವವನು.