<p><span style="color: #333333; font-family: 'Helvetica Neue', Helvetica, Arial, sans-serif; line-height: 20px;">ಮೂಲತ: ಚೋರವೃತ್ತಿಯವನಾಗಿದ್ದ ಈತ ಉರಿಲಿಂಗದೇವನ ಶಿಷ್ಯತ್ವ ವಹಿಸಿ, ಘನ ವಿದ್ವಾಂಸನೂ, ಅನುಭಾವಿಯೂ ಆಗಿ ಉತ್ತಮ ವಚನಗಳನ್ನು ರಚಿಸಿದ್ದಾನೆ. ಕಾಳವ್ವೆ ಈತನ ಸತಿ. ಉರಿಲಿಂಗದೇವರ ನಂತರ ಪೀಠವನ್ನು ಏರಿದ ಪೆದ್ದಣ್ಣ ಜಾತಿಯಿಂದ ಅಸ್ಪೃಶ್ಯನೆಂದು ತಿಳಿದುಬರುವುದರಿಂದ, ಈ ಪೀಠಾರೋಹಣ ಒಂದು ಕ್ರಾಂತಿಕಾರಿ ಘಟನೆಯೆಂದೇ ಹೇಳಬೇಕು. ಅಸ್ಪೃಶ್ಯ ಲಿಂಗಾಯತರ ಅನೇಕ ಮಠಗಳು ಕರ್ನಾಟಕದಲ್ಲಿ ಇದ್ದು ಅವುಗಳನ್ನು ಉರಿಲಿಂಗಪೆದ್ದಿ ಮಠಗಳೆಂದು ಕರೆಯುತ್ತಾರೆ. </span><br style="box-sizing: border-box; color: #333333; font-family: 'Helvetica Neue', Helvetica, Arial, sans-serif; line-height: 20px;" /><br style="box-sizing: border-box; color: #333333; font-family: 'Helvetica Neue', Helvetica, Arial, sans-serif; line-height: 20px;" /><span style="color: #333333; font-family: 'Helvetica Neue', Helvetica, Arial, sans-serif; line-height: 20px;">'ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ' ಆಂಕಿತದಲ್ಲಿ ಈತ ರಚಿಸಿದ ೩೬೬ ವಚನಗಳು ದೊರೆತಿವೆ. ಅವುಗಳಲ್ಲಿ ಗುರುಮಹಿಮೆಗೆ ಅಗ್ರಸ್ಥಾನ ಸಂದಿದೆ. ಜೊತೆಗೆ ಲಿಂಗ-ಜಂಗಮ ತತ್ವದ ವಿಚಾರ, ಕುಲ-ಜಾತಿ ಸಮಸ್ಯೆ ನಿರೊಪಿತವಾಗಿವೆ. ವಚನಗಳ ಮಧ್ಯದಲ್ಲಿ ಬಳಸಿದ ಹೇರಳ ಸಂಸ್ಕೃತ ಉದ್ಧರಣೆಗಳು ಈತನ ಪಾಂಡಿತ್ಯಕ್ಕೆ ನಿದರ್ಶನವೆನಿಸಿವೆ. ಧರ್ಮ ಹಾಗೂ ಧರ್ಮದ ತತ್ವ, ಆಚರಣೆಗಳ ಪ್ರಚಾರ ಇವನ ವಚನಗಳ ಪ್ರಧಾನ ಆಶಯ. ವಚನಗಳ ನಡುವೆ ಬಳಸುವ ಯಥೇಚ್ಛ ಸಂಸ್ಕೃತ ಶ್ಲೋಕಗಳ ಆಧಾರದಿಂದ ಈತ ದೊಡ್ಡ ಜ್ಞಾನಿ ಎಂದು ಹೇಳಬಹುದು. ಹುಟ್ಟಿನಲ್ಲಿ ಅಂತ್ಯಜನಾಗಿ ಗುರುಪೀಠವನ್ನೇರಿದ ಸಂಗತಿ ಕ್ರಾಂತಿಕಾರಕವಾದುದು. ಈತನಲ್ಲಿ ಸಾಮಾಜಿಕ ವಿಡಂಬನೆ ತೀಕ್ಷ್ಣವಾಗಿದೆ. ತನಗೆ ಸರಿಕಾಣದ್ದನ್ನು ಮುಚ್ಚು ಮರೆಯಿಲ್ಲದೆ ಟೀಕಿಸಿರುವನು. ಇವನಲ್ಲಿ ವೈಚಾರಿಕತೆ ಪ್ರಧಾನವಾಗಿದೆ.</span></p>
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ